ಬೀದರ್: ಅಮಾನತುಗೊಂಡ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಎಂ.ಅಗಡಿ ಅವರು ಬಿಜೆಪಿಯತ್ತ ಒಲವು ತೋರುತ್ತಿರುವ ಬಗ್ಗೆ ಪಟ್ಟಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.
ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಮನಾಬಾದನಲ್ಲಿ ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಬೃಹತ್ ಪ್ರತಿಭಟನೆ ವೇಳೆ ಸಮುದಾಯ ಒಂದರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕಾಗಿ ಅಮಾನತುಗೊಂಡ ಜೆಡಿಎಸ್ ತಾಲ್ಲೂಕು ಘಟಕ ಅಧ್ಯಕ್ಷ ಮಹೇಶ ಎಂ.ಅಹಡಿ ಅವರು ಕಳೆದ ನಾಲ್ಕೈದು ದಿನಗಳಿಂದ ಬಿಜೆಪಿ ಮುಖಂಡರ ಸಂಪರ್ಕದಲ್ಲಿರುವ ಬಗ್ಗೆ ಪಟ್ಟಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.
ಈ ಕುರಿತು ಮಹೇಶ ಅಗಡಿ ಅವರನ್ನು ಸಂಪರ್ಕಿಸಿದಾಗ ಎಲ್ಲ ಪಕ್ಷಗಳಲ್ಲೂ ಎಲ್ಲರಿಗೂ ಸ್ನೇಹಿತರಿರುವಂತೆ ನನಗೂ ಇದ್ದಾರೆ. ಸದ್ಯ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ರಾಜಕೀಯದಲ್ಲಿ ಯಾರು ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ. ಬಿಜೆಪಿ ಮುಖಂಡರೂ ನನ್ನೊಂದಿಗೆ ನಾನು ಅವರೊಂದಿಗೆ ಸಂಪರ್ಕದಲ್ಲಿರುವುದು ನಿಜ. ಅದರ ಜತೆ ಅನ್ಯ ಪಕ್ಷಗಳ ಕೆಲ ಮುಖಂಡರೂ ಸಂಪರ್ಕಿಸಿದ್ದಾರೆ. ರಾಜಕೀಯದಲ್ಕಿ ಏನು ಬೇಕಾದರೂ ಆಗಬಹುದು ಬರುವ ದಿನಗಳನ್ನು ಕಾದುನೋಡಿ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಸುಳಿವು ನೀಡಿದರು.