ರಾಜ್ಯದ 58 ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ ಭರ್ಜರಿ ಜಯಭೇರಿ, ಆಡಳಿತಾರೂಢ ಬಿಜೆಪಿಗೆ ಮುಖಭಂಗ!

ಉಮೇಶ ಗೌರಿ (ಯರಡಾಲ)

ಸುದ್ದಿ ಸದ್ದು ನ್ಯೂಸ್

ರಾಜ್ಯದಾದ್ಯಂತ ಡಿಸೆಂಬರ್ 27 ರಂದು 5 ನಗರಸಭೆ ಸಭೆ ಸೇರಿದಂತೆ 58 ಸ್ಥಳೀಯ ಸಂಸ್ಥೆಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು (ಡಿ 30) ಪ್ರಕಟವಾಗಿದೆ. 

ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಕೇಂದ್ರ ಮತ್ತು ರಾಜ್ಯದ ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ರಾಜ್ಯದಲ್ಲಿ ಒಟ್ಟು 19 ಪುರಸಭೆಗಳ ಪೈಕಿ ಕಾಂಗ್ರೆಸ್- 8, ಬಿಜೆಪಿ- 6, ಜೆಡಿಎಸ್- 1 ಪುರಸಭೆಗಳ ಅಧಿಕಾರದ ಚುಕ್ಕಾಣಿ ಹಿಡಿದರೆ 4 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದ್ದು ಯಾರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂದು ಕಾದು ನೋಡಬೇಕಿದೆ.

ಇನ್ನು 5 ನಗರಸಭೆಗಳ ಪೈಕಿ ಬಿಜೆಪಿ- 3 ನಗರ ಸಭೆಗಳಲ್ಲಿ ಅಧಿಕಾರ ಪಡೆದಿವೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಯಾವುದೇ ನಗರಸಭೆಯಲ್ಲಿ ಬಹುಮತ ಪಡೆಯಲು ಸಾಧ್ಯವಾಗಿಲ್ಲ. 2 ನಗರಸಭೆಗಳಲ್ಲಿ ಅತಂತ್ರ ಪರಿಸ್ಥಿತಿ ಎದುರಾಗಿದ್ದು ಯಾರು ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಕಾದು ನೋಡಬೇಕಿದೆ

ರಾಜ್ಯದಲ್ಲಿ ಒಟ್ಟು 34 ಪಟ್ಟಣ ಪಂಚಾಯತಿಗಳ ಪೈಕಿ ಕಾಂಗ್ರೆಸ್- 13, ಬಿಜೆಪಿ- 5, ಇತರರು- 5 ಅಧಿಕಾರ ಹಿಡಿದರೆ ಉಳಿದ 10 ಪಟ್ಟಣ ಪಂಚಾಯಿತಿಗಳಿಗೆ ಅತಂತ್ರ ಫಲಿತಾಂಶ ಎದುರಾಗಿದ್ದು ಯಾರು ಅಧಿಕಾರದ ಗದ್ದುಗೆ ಏರುತ್ತಾರೆ ಎಂದು ಕಾದು ನೋಡಬೇಕಾಗಿದೆ

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲಿಯೇ ಬಿಜೆಪಿ ಹಿನಾಯ ಸೋಲು ಅನುಭವಿಸಿದ್ದು ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದುಕೊಂಡಿದೆ

ಬಂಕಾಪುರ ಪುರಸಭೆಯಲ್ಲಿ ಇರುವ ಒಟ್ಟು 23 ಸ್ಥಾನಗಳ ಪೈಕಿ ಕಾಂಗ್ರೆಸ್- 14, ಬಿಜೆಪಿ- 7, ಪಕ್ಷೇತರರು- 2 ಸ್ಥಾನ ಗೆದ್ದರೆ ಗುತ್ತಲ ಪಟ್ಟಣ ಪಂಚಾಯಿತಿಯಲ್ಲಿ ಇರುವ ಒಟ್ಟು 18 ಸ್ಥಾನಗಳ ಪೈಕಿ ಕಾಂಗ್ರೆಸ್‌- 11, ಬಿಜೆಪಿ- 6, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಬಿಡದಿ ಪುರಸಭೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ನೇರಾನೇರ ಸ್ಪರ್ಧೆ ಏರ್ಪಟ್ಟು ಜೆಡಿಎಸ್ 14 ವಾರ್ಡುಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಪಡೆದುಕೊಂಡರೆ ಕಾಂಗ್ರೆಸ್ 9 ವಾರ್ಡುಗಳಲ್ಲಿ ಗೆದ್ದು ಬೀಗಿದೆ. ಬಿಜೆಪಿ 12 ವಾರ್ಡುಗಳಲ್ಲಿ ಸ್ಪರ್ಧಿಸಿದ್ದು 12 ವಾರ್ಡುಗಳಲ್ಲಿಯೂ ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದೆ.

 

 

 

 

 

Share This Article
";