ಬೆಂಗಳೂರು: ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ. ಸಿಜೆಐ ಎನ್.ವಿ.ರಮಣ ನೇತೃತ್ವದಲ್ಲಿ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಶೀಘ್ರವೇ ಇದರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.
ಚುನಾವಣೆ ವೇಳೆ ಎಸಿಬಿ ರದ್ದುಪಡಿಸುವ ಬಗ್ಗೆ ಬಿಜೆಪಿ ಹೇಳಿತ್ತು. ಆದ್ರೆ ಈಗ ಎಸಿಬಿ ರದ್ದುಪಡಿಸುವ ಆದೇಶದ ವಿರುದ್ಧವೇ ಹೋರಾಟ ಬಿಜೆಪಿ ಸರ್ಕಾರ ಮುಂದಾಗಿದ್ದು, ಅಚ್ಚರಿಗೆ ಕಾರಣವಾಗಿದೆ. ಎಸಿಬಿ ರದ್ದುಪಡಿಸುವ ಬಗ್ಗೆ ಚುನಾವಣೆ ಪ್ರಣಾಳಿಕೆಯಲ್ಲೂ ಬಿಜೆಪಿ ಹೇಳಿಕೊಂಡಿತ್ತು. ಈಗ ಎಸಿಬಿ ರದ್ದುಪಡಿಸುವ ಆದೇಶದ ವಿರುದ್ಧವೇ ಸುಪ್ರೀಂ ಮೊರೆ ಹೋಗುವ ಮೂಲಕ ಬಿಜೆಪಿ ಉಲ್ಟಾ ಹೊಡೆದಿದೆ.
ಎಸಿಬಿ ರಚನೆ ಮಾಡಿ 2016 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸುವ ಮೂಲಕ ಮಹತ್ವದ ಆದೇಶ ಹೊರಡಿಸಿತ್ತು. ಆಗಸ್ಟ್ 11ರಂದು ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು.
ಎಸಿಬಿ ರಚನೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್ ಎಸಿಬಿ ಈವರೆಗೂ ನಡೆಸಿರುವ ತನಿಖೆ, ವಿಚಾರಣೆಯನ್ನು ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿದೆ ಎಂದಿತ್ತು. ಎಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳು ಪುನರ್ ಸ್ಥಾಪನೆಯಾಗಲಿದ್ದು, ಎಸಿಬಿಯಲ್ಲಿರುವ ಪೊಲೀಸರು ಲೋಕಾಯುಕ್ತ ವ್ಯಾಪ್ತಿಗೆ ಬರುತ್ತಾರೆ ಎಂದು ಆದೇಶದಲ್ಲಿ ಹೇಳಿತ್ತು.
ಇದೀಗ ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದ್ದು, ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.