ಅನುಚಿತ ವರ್ತನೆ ಹಾಗೂ ಅನುದಾನ ದುರ್ಬಳಕೆ ಹಿನ್ನೆಲೆಯಲ್ಲಿ ವೀರಾಪೂರ ಪ್ರೌಢ ಶಾಲಾ ಶಿಕ್ಷಕ ಅಮಾನತ್ತು

ಉಮೇಶ ಗೌರಿ (ಯರಡಾಲ)

ಸುದ್ದಿ ಸದ್ದು ನ್ಯೂಸ್

ಚನ್ನಮ್ಮನ ಕಿತ್ತೂರು: ಶಾಲಾ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ಹಾಗೂ ಸರಕಾರದಿಂದ ಮಂಜೂರಾದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಪ್ರೌಡಶಾಲಾ ಶಿಕ್ಷಕ ಸೇವೆಯಿಂದ ಅಮಾನತುಗೊಳಿಸಿದ ಘಟನೆ ಐತಿಹಾಸಿಕ ಚನ್ನಮ್ಮನ ಕಿತ್ತೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ ನಡೆದಿದೆ.

ವೀರಾಪೂರ ಗ್ರಾಮದ ಪ್ರೌಡಶಾಲಾ  ಶಿಕ್ಷಕ ಮಸೂದ್ ಮುಲ್ಲಾ ತರಗತಿಯಲ್ಲಿ ವಿಧ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ಮತ್ತು ಸರಕಾರದಿಂದ ಮಂಜೂರಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಎಂದು ಶಾಲೆಯ ವಿಧ್ಯಾರ್ಥಿನಿಯರು ಹಾಗೂ ಗ್ರಾಮಸ್ಥರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಳಗಾವಿಯ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜ ನಾಲತ್ತವಾಡ ಇವರು ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

Share This Article
";