ನೀತಿಸಂಹಿತೆ ಉಲ್ಲಂಘನೆ! ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು

ಉಮೇಶ ಗೌರಿ (ಯರಡಾಲ)

ಬೆಳಗಾವಿ:  ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ಧೇಶದಿಂದ ಮುಗಳಖೋಡ ಪಟ್ಟಣದ ಬಳಿ ಏ.29 ರಂದು ಹಣ ಹಂಚಿಕೆ ಮಾಡಿ ಮತದಾರರಿಗೆ ಆಮಿಷ ತೋರಿಸಲಾಗಿದೆ ಎಂದು ಖಾಸಗಿ ಟಿವಿ ವರದಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿನ ಪ್ರತಿಕ್ರಿಯೆ ಆಧರಿಸಿ ದೂರು ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಹಾಗೂ ಮುಗಳಖೋಡದ ಹಾಲಪ್ಪ ಹನಮಂತ ಶೇಗುಣಸಿ ಎಂಬುವರ ವಿರುದ್ಧ ಸರಕಾರಿ ಅಧಿಕಾರಿ ಅಭಿಷೇಕ್ ಪಾಂಡೆ ಅವರು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಭಾನುವಾರ (ಏ.30) ದೂರು ನೀಡಿರುತ್ತಾರೆ.

Share This Article
";