ಎಂಇಎಸ್ ಪುಂಡಾಟಿಕೆ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ: ಸಿ.ಎಂ ಬೊಮ್ಮಾಯಿ‌

ಉಮೇಶ ಗೌರಿ (ಯರಡಾಲ)

ಬೆಳಗಾವಿ: ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಅದರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಎಂಇಎಸ್ ನವರು ನಡೆಸಿದ ಗಲಾಟಗೆ ಈಗಾಗಲೇ ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಮಹಾರಾಷ್ಟ್ರ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಡಿಜಿ, ಹೋಂ ಕಾರ್ಯದರ್ಶಿ ಮಾತುಕತೆ ನಡೆಸಲಿದ್ದಾರೆ. ಅವಶ್ಯಕತೆ ಬಿದ್ದರೆ ನಾನು‌ ಮಹಾರಾಷ್ಟ್ರದ ಜತೆಗೆ ಮಾತನಾಡುತ್ತೇನೆ ಎಂದರು.

ಬೆಳಗಾವಿ ಘಟನೆಯಲ್ಲಿ ಪೊಲೀಸ್ ವೈಫಲ್ಯದ ಪ್ರಶ್ನೆ ಇಲ್ಲ.
ರಾತ್ರಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ. ರಾತ್ರಿ ಬಂದು ಗಲಾಟೆ ಮಾಡಿದ್ದು ಪುರುಷಾರ್ಥನಾ ಎಂದು ಪ್ರಶ್ನಿಸಿದ ಅವರು, ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗೃಹ ಸಚಿವರಿಗೆ ಗಲಾಟೆ ಬಗ್ಗೆ ಈ ತನಿಖೆ ಪ್ರಗತಿ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇನೆ ಎಂದರು.

Share This Article
";