ಇಂದಿನಿಂದ ವಾರಾಂತ್ಯ ಕರ್ಪ್ಯೂ; ಸೋಮಲಿಂಗಪ್ಪ ಹಾಲಗಿ

ಸುದ್ದಿ ಸದ್ದು ನ್ಯೂಸ್

ಚನ್ನಮ್ಮನ ಕಿತ್ತೂರು: ಶುಕ್ರವಾರ ರಾತ್ರಿ 8 ಗಂಟೆಯಿಂದ ಪ್ರಾರಂಭವಾಗುವ ವಾರಾಂತ್ಯ ಕರ್ಫ್ಯೂ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಜಾರಿಯಲ್ಲಿ ಇರುತ್ತದೆ ಎಂದು ತಾಲೂಕಾ ದಂಡಾಧಿಕಾರಿ ಸೋಮಲಿಂಗಪ್ಪ ಹಾಲಗಿ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಸ್ಥಳೀಯ ಪಟ್ಟಣ ಪಂಚಾಯತ ಸಭಾಭವನದಲ್ಲಿ  ನಡೆದ ಪೊಲೀಸ್ ಇಲಾಖೆ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಹಾಗೂ ಪಟ್ಟಣದ ವರ್ತಕರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.

ಸರಕಾರ ವಾರಾಂತ್ಯ ಕರ್ಫ್ಯೂ ಘೋಷಣೆ ಹಿನ್ನೆಲೆಯಲ್ಲಿ ಎರಡೂ ದಿನ ಅಂದರೆ ಶನಿವಾರ ಮತ್ತು ರವಿವಾರ ಮುಂಜಾನೆ 6 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ವ್ಯಾಪಾರ, ವಹಿವಾಟು ನಡೆಸಲು ಅನುಕೂಲ ಮಾಡಿಕೊಡಲಾಗಿದೆ. ಹೋಟೆಲ್, ದಾಬಾ, ಖಾನಾವಳಿಗಳಲ್ಲಿ ಪಾರ್ಸಲ್‌ಗೆ ಮಾತ್ರ ಅನುವು ಮಾಡಿ ಕೊಡಲಾಗಿದೆ. ಔಷಧ, ಹಾಲು, ಹಣ್ಣು ಸೇರಿ ಅಗತ್ಯ ವಸ್ತುಗಳ ಮಳಿಗೆಗಳು ತೆರೆದಿರುತ್ತವೆ. ಇವುಗಳಿಗೆ ವಾರಾಂತ್ಯ ಕರ್ಫ್ಯೂ ಅಡ್ಡಿ ಬರುವುದಿಲ್ಲ ಎಂದರು.

 

ಯತಾಸ್ಥತಿ ಜನವರಿ 8 ರಿಂದ 19 ರವರೆಗೆ ವಾರಾಂತ್ಯ ಕಪ್ಯೂ ಜಾರಿಯಲ್ಲಿ ಇರುತ್ತದೆ. ಈ ಅವಧಿಯಲ್ಲಿ ಸಭೆ, ಸಮಾರಂಭ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕರು ಸೇರುವ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ. ಈಗಾಗಲೆ ನಿಗದಿ ಪಡಿಸಲಾದ ವಿವಾಹ ಕಾರ್ಯಕ್ರಮವನ್ನು ಕಂದಾಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದು ನಡೆಸಲು ಕಟ್ಟೆಚ್ಚರ ನೀಡಲಾಗಿದೆ. ಕಾರ್ಯಕ್ರಮ ಒಳಾಂಗಣದಲ್ಲಿ ಇದ್ದರೆ 100 ಜನ ಮತ್ತು ಹೊರಾಂಗಣದಲ್ಲಿ ಇದ್ದರೆ 200 ಜನರು ಮಾತ್ರ ಸೇರಬೇಕು. ಜೊತೆಗೆ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳಾದ ಮಾಸ್ಕ್‌ ಧರಿಸುವುದು, ಸ್ಯಾನಿಟೈಸರ್ ಸಿಂಪರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿ ಇರುತ್ತದೆ. ತಪ್ಪಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲ್ಲೂಕಿನ ಗ್ರಾಮಗಳಲ್ಲಿ ಧ್ವನಿವರ್ಧಕ, ಡಂಗೂರ ಸಾರುವ ಮೂಲಕ ಅರಿವು ಮೂಡಿಸಲಾಗುವುದು ಎಂದ ಅವರು ಈಗಾಗಲೇ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಸಹಾಯಕರಿಗೆ ತಿಳಿಸಲಾಗಿದೆ ಎಂದು ವಿವರಿಸಿದರು.

ಪ್ರತಿ ವರ್ಷ ಎಂ.ಕೆ ಹುಬ್ಬಳ್ಳಿ ಹತ್ತಿರ ಇರುವ ಮಲಪ್ರಭಾ ನದಿ ದಡದಲ್ಲಿ ಸಂಕ್ರಮಣದ ನಿಮಿತ್ತ ಸಾಮೂಹಿಕ ಪುಣ್ಯಸ್ನಾನಕ್ಕೆ ವಿವಿಧ ಗ್ರಾಮಗಳಿಂದ ಭಕ್ತರು ಆಗಮಿಸುತ್ತಿದ್ದರು. ಈ ವರ್ಷ ಜನೆವರಿ 14 ಮತ್ತು 15 ರಂದು ಸಾಮೂಹಿಕ ಪುಣ್ಯ ಸ್ನಾನ ನಿಷೇಧಿಸಲಾಗಿದ್ದು ಭಕ್ತರು ಸಹಕರಿಸಬೇಕು. ಎಂದು ಮನವಿ ಮಾಡಿದರು.

ಎಲ್ಲರೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದಂಡಾಧಿಕಾರಿಗಳು ತಾಕೀತು ಮಾಡಿದರು. ಕೈಗಾರಿಕೆ ಪ್ರದೇಶಗಳಿಗೆ ಕೆಲಸಕ್ಕೆ ತೆರಳುವವರು ಆಯಾ ಕಂಪನಿಯ ಗುರುತಿನ ಚೀಟಿ ತೋರಿಸಿ ಹೋಗಬಹುದು ಎಂದಿನಂತೆ ಬಸ್ ಸಂಚಾರ ಇರುತ್ತದೆ.ಎಂದು ಹೇಳಿದರು.

ಈ ವೇಳೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರಕಾಶ ಮಠದ ಮತ್ತು ಸಿಬ್ಬಂದಿ, ವೃತ್ ನಿರೀಕ್ಷಕ ಮಂಜುನಾಥ ಕುಸುಗಲ್, ಪಿಎಸ್‌ಐ ದೇವರಾಜ ಉಳ್ಳಾಗಡ್ಡಿ ಹಾಗೂ ಎಸ್. ಬಿ. ಮಾವಿನಕಟ್ಟಿ, ಪಟ್ಟಣ ಪಂಚಾಯತ ಸಿಬ್ಬಂದಿ ಸೇರಿದಂತೆ ಇನ್ನೂ ಅನೇಕರು ಇದ್ದರು

 

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";